ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ.

ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು ತಡೆಯಲು ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಕರ್ನಾಟಕ ಕಾವಲು ಪಡೆ ಒತ್ತಾಯಿಸುತ್ತದೆ. ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ತಾಲ್ಲೂಕು ಕಾರ್ಯದರ್ಶಿಗಳಾದ ಎಸ್.ಮುಬಾರಕ್. ತಾಲ್ಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡರು. ಹಾಗೂ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

About The Author