Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ) ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ದಂಡಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ ಬಾರಗಳು, ಕ್ಲಬ್‌ಗಳು ಮತ್ತು ಮದ್ಯದ ಡೀಪೋಗಳನ್ನು ಈ ನಿಷೇಧಾಜ್ಞೆ ಜ್ಯಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 21(2)ರನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶ ನೀಡಿದ್ದಾರೆ.
ಧಾರವಾಡ ಅಬಕಾರಿ ಉಪ ಆಯುಕ್ತರು ಮತ್ತು ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರ ವ್ಯಾಪ್ತಿಯಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯ ನಿಷೇಧ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.