ಕಮಿಷನ್ ಚೋರ್ ಸರ್ಕಾರ; ಕಾಮ್ ಚೋರ್ ಮಂತ್ರಿಗಳು!: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Political News: ಇಷ್ಟು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಇಲ್ಲ, ಚಿಕಿತ್ಸೆ ನೀಡುತ್ತಿಲ್ಲ, ಸ್ಕ್ಯಾನರ್ ವ್ಯವಸ್ಥೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಇದೀಗ ಕಾರ್ಮಿಕ ಇಲಾಖೆಯಲ್ಲಿ ಹೊಸ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಇಲಾಖೆಯಲ್ಲಿ ಇಎಸ್ಐ ಹಣವನ್ನು ತುಂಬಿಲ್ಲದ ಕಾರಣ, ಕಾರ್ಮಿಕರಿಗೆ ಫ್ರೀ ಚಿಕಿತ್ಸೆ ಬಂದ್ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿ ಬಂದಿದೆ.

ಈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮಂತ್ರಿಗಳು ಅಂತಾ ಹೇಳಿರುವ ಅಶೋಕ್ ಅವರು,ಸನ್ಮಾನ್ಯ ರಾಹುಲ್ ಗಾಂಧಿಯವರೇ, ಕರ್ನಾಟಕದಲ್ಲಿರುವ ನಿಮ್ಮ ಕಮಿಷನ್ ಚೋರ್ ಕಾಂಗ್ರೆಸ್ ಸರ್ಕಾರದಲ್ಲಿ ಕಾಮ್ ಚೋರ್ (KamChor) ಮಂತ್ರಿಗಳೇ ತುಂಬಿ ತುಳುಳುಕುತ್ತಿತ್ದಾರೆ ಎಂದು ಆರೋಪಿಸಿದ್ದಾರೆ.

ಒಂದು ಕಡೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹಣಕಾಸು ಇಲಾಖೆಯಿಂದ ₹880 ಕೋಟಿ ಅನುದಾನ ಬಿಡುಗಡೆ ಆಗಿದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿ ಮಾಡದೆ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳಿಗೆ ₹143 ಕೋಟಿ ಬಾಕಿ ಬಿಲ್ ಪಾವತಿ ಮಾಡದೆ, ಸಾರ್ವಜನಿಕರು ಪರದಾಡುವಂತೆ ಮಾಡಿದ್ದಾರೆ ಎಂದು ಅಶೋಕ್ ವಾಾಗ್ದಾಳಿ ನಡೆಸಿದ್ದಾರೆ.

ಇನ್ನೊಂದು ಕಡೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ESI ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಮಾಡಿದ ಕಂಪನಿಗಳಿಗೆ ₹60 ಕೋಟಿ ಬಿಲ್ ಪಾವತಿ ಬಾಕಿ ಉಳಿಸಿಕೊಂಡು, ರೇಟ್ ಕಾರ್ಡ್ ಆಧಾರದಲ್ಲಿ ಔಷಧಿ, ಉಪಕರಣ ಖರೀದಿ ಮಾಡುವ ಮೂಲಕ ಕಾರ್ಮಿಕರ ಹಣ ಲೂಟಿ ಹೊಡೆಯಲು ಹೊರಟಿದ್ದಾರೆ ಎಂದು ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಎಲ್ಲ ಇಲಾಖೆಗಳಲ್ಲೂ ಹಿಂದಿನ ವರ್ಷಗಳದ್ದೇ ಸಾವಿರಾರು ಕೋಟಿ ಬಿಲ್ ಪಾವತಿ ಬಾಕಿ ಇರುವಾಗ ಈಗ ಇನ್ನೊಂದು ಬಜೆಟ್ ಮಂಡನೆ ಮಾಡಿ ಏನು ಸಾಧಿಸಲು ಹೊರಟಿದ್ದೀರಿ ಸ್ವಾಮಿ? ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.

About The Author