ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದರು.

About The Author