Sunday, May 19, 2024

Latest Posts

ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

- Advertisement -

Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ.

ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ||ರಾಜ್‌ಕುಮಾರ್‌, ಡಾ||ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

- Advertisement -

Latest Posts

Don't Miss