political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು ಎಸೆಯುತ್ತೆವೆಂದು ಸವಾಲು ಹಾಕಿದರು.
ಶುಕ್ರವಾರ ದೇವನಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಕೊನೆಯ ವಿಧಾನಸಭಾ ಚುನಾವಣೆಯನ್ನು ಕರ್ನಾಟಕದಲ್ಲಿ ಎದುರಿಸುತ್ತಿದೆ. ಎಲ್ಲ ಕಡೆಯಲ್ಲಿಯೂ ಸೋತು ಧೂಳಿಪಟವಾಗಿರುವ ಕಾಂಗ್ರೆಸ್ ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಸೋತರೆ ದೇಶಾದ್ಯಂತ ಬೇರು ಸಮೇತ ಕಿತ್ತು ಹಾಕಿದಂತಾಗಲಿದೆ. ಬ್ರಿಟಿಷರ ವಂಶಾವಳಿ ಪಕ್ಷವನ್ನು ಬೇರು ಸಮೇತ ಕಿತ್ತು ಹಾಕುವ ಕೆಲಸ ಮಾಡಬೇಕಿದೆ ಎಂದು ವಾಗ್ದಾಳಿ ನಡೆಸಿದರು.




