Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ  ಕಾಂಗ್ರೆಸ್ ಪಕ್ಷದ  ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ  ಮಾಜಿ ಶಾಸಕ ವಾಸು ಅವರಿಗೆ  ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ  ವಾಸುಗೆ ನೋಟಿಸ್ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಎಂದು ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ನಿಮಗೆ ಪತ್ರ ಬಂದ 7 ದಿನಗಳ ಒಳಗಾಗಿ ಲಿಖಿತ ವಿವರಣೆ ಮೂಲಕ ಉತ್ತರ ಕೊಡಿ ಎಂದು ನೋಟಿಸ್​ನಲ್ಲಿ ಸೂಚಿಸಿದ್ದಾರೆ..

ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿಸಿ ಮೇಲುಗೈ ಸಾಧಿಸಿದ್ದ ಸಿದ್ದರಾಮಯ್ಯ ಬೆಂಬಲಿಗರು, ಇದೀಗ ವಾಸುಗೆ ಪಕ್ಷದಿಂದ ತೆಗೆದು ಹಾಕಲು  ಪ್ರಯತ್ನ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬೆಂಬಲವಾಗಿ ನಿಂತಿದ್ದೇ ವಾಸುಗೆ‌ ಮುಳುವಾಗುತ್ತಿದೆಯಾ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ ಟಿಕೆಟ್​ ತಪ್ಪಿಸಿದ್ದಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಪಿ ವಾಸು ಅವರು ಸಿದ್ದರಾಮಯ್ಯಗೆ ಬೆಂಬಲ ನೀಡಿಲ್ಲ. ಈ ಬಗ್ಗೆ ಕೆಲ ನಾಯಕರು ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದು, ಇದಕ್ಕೆ ಸಿಎಂ ಗರಂ ಆಗಿದ್ದು, ತಮ್ಮ ಬೆಂಬಲಿಗರನ್ನು ವಾಸು ವಿರುದ್ಧ ಛೂ ಬಿಟ್ಟಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ್ದಾರೆ. ಅಲ್ಲದೇ ಚಾಮರಾಜ ಕ್ಷೇತ್ರದಲ್ಲೂ ಸಹ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಹೀಗಾಗಿ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿದ್ದರು. ಇದೀಗ ಕಾಂಗ್ರೆಸ್ ಶಿಸ್ತುಪಾಲನ ಸಮಿತಿಯಿಂದಲೂ ಸಹ ನೋಟಿಸ್​ ಜಾರಿಯಾಗಿದ್ದು, ಉಚ್ಚಾಟನೆ ಕತ್ತಿ ಬೀಸುತ್ತಿದೆ ಹಾಗಿದ್ದರೆ ವಾಸುರವರು ಇದಕ್ಕೆ ಏನು ಉತ್ತರ ಕೊಡಲಿದ್ದಾರೆ ಎಂದು ಕಾದು ನೋಡಬೇಕಿದೆ.

Manipur : ಮಣಿಪುರದಲ್ಲಿ ಪೈಶಾಚಿಕ ಕೃತ್ಯ: ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ..!

Bjp : ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ

Bihar : ಪ್ರಿಯಕರನ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಪೋಷಕರು

About The Author