Tuesday, January 14, 2025

Latest Posts

ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ

- Advertisement -

political news:

ರಾಜ್ಯಪಾಲರ ಭಾಷಣ ಸಪ್ಪೆ :ಮಾಜಿ ಸಿಎಂ ಬೊಮ್ಮಾಯಿಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು.
ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ ಎಂದು ಆರೋಪಿಸಿದರು.

ಪ್ರಧಾನಿ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

 

- Advertisement -

Latest Posts

Don't Miss