Sunday, December 1, 2024

Latest Posts

Basavaraj bommai: ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು:

- Advertisement -

ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ.

2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ, ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವು. ಲೋಕಸಭೆಗೆ ವಿಚಾರಗಳು ಬೇರೆ ಇರುತ್ತವೆ. ನಾವು 25 ಸ್ಥಾನಗಳನ್ನು ಉಳಿಸಿಕೊಳ್ಳಲು ತಯಾರಿ ಮಾಡಿಕೊಳ್ಳೇವೆ ಎಂದು ಹೇಳಿದರು.

ನಾನು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಂಸದರು ಮನವಿ ಮಾಡಿದ್ದರು. ಈ ಹಿನ್ನಲೆ ದೆಹಲಿಗೆ ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಅಮಿತ್ ಶಾ ಭೇಟಿಗೂ ಪ್ರಯತ್ನ ಮಾಡುತ್ತೇನೆ. ಅವರು ಸಂಸತ್ ಕಲಾಪ ಹಿನ್ನಲೆ ಸಮಯ ಸಿಕ್ಕಿಲ್ಲ. ಸಮಯ ಸಿಕ್ಕ ಬಳಿಕ ನಾನು ಭೇಟಿ ಮಾಡುತ್ತೇನೆ ಹೈಕಮಾಂಡ್ ಬುಲಾವ್ ನೀಡಿಲ್ಲ ಎಂದು ಹೇಳಿದರು .

ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಹೈಕಮಾಂಡ್ ಸೂಕ್ತ ನಿರ್ಣಯ, ಸೂಕ್ತ ಸಮಯದಲ್ಲಿ ತೆಗೆದುಕೊಳ್ಳಬೇಕು. ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಬಿಜೆಪಿ ರಾಷ್ಟ್ರೀಯ ಪಕ್ಷ, ಸೋಲು ಗೆಲುವು ಸಹಜ. ಇದರಲ್ಲಿ ರಾಜ್ಯ ನಾಯಕರ ಮೇಲೆ ಬೇಸರ ಮಾಡಿಕೊಳ್ಳುವುದು ಏನು ಇಲ್ಲ. ನಾಳೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡ್ತೇನೆ ಎಂದು ಹೇಳಿದರು. ಇನ್ನು ಚೆಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರದ ಆರೊಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪತ್ರದ ಬಗ್ಗೆ ಮಾಹಿತಿ ಇಲ್ಲ. ರಾಜ್ಯಪಾಲರಿಂದ ಪತ್ರ ಬಂದ ಬಳಿಕ ಕ್ರಮ ವಹಿಸಬೇಕು. ರಾಜ್ಯಭವನ ಪತ್ರ ಬರೆದಿದಿದೆಯೊ ಇಲ್ಲ ಸ್ಪಷ್ಟಪಡಿಸಬೇಕು, ಇನ್ನು ಸ್ಪಷ್ಟತೆ ಸಿಕ್ಕಿಲ್ಲ ಎಂದು ಹೇಳಿದರು.

DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?

DK Shivakumar: ಕುಮಾರಕೃಪಾ ಅತಿಥಿಗೃಹದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

 

- Advertisement -

Latest Posts

Don't Miss