ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.
ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಿದ್ದಾರೆ.
ಇನ್ನು ಇಲ್ಲಿನ ಗ್ರಾಮಸ್ಥರು ಪಟಾಕಿ ಸಿಡಿಸಿ, ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಗ್ರಾಮದ ಮುಖಂಡರು ಕೈ ಅಭ್ಯರ್ಥಿ ಪರ ಭಾವುಕರಾಗಿ ಮತಯಾಚಿಸಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ನೆರವಾಗಿದ್ದಾರೆ ಅವರನ್ನ ನಾನು ಈ ಬಾರಿ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.
ಬಳಿಕ ನಿಮ್ಮ ಮನೆ ಮಗ ನಾನು. ನನಗೆ ಮತ ಕೊಟ್ಟು ಆಶೀರ್ವಾದ ಮಾಡಿ. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ. ನಿಮ್ಮ ಪ್ರತಿ ಕಷ್ಟದಲ್ಲೂ ನಾನು ನಿಲ್ಲುತ್ತೇನೆ ಎಂದು ಕೈ ಅಭ್ಯರ್ಥಿ ಮತಯಾಚಿಸಿದ್ದಾರೆ.