Friday, July 18, 2025

Latest Posts

ಜುಲೈ 26ಕ್ಕೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ

- Advertisement -

ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಮಾವೇಶದ ಸಿದ್ಧತೆಯ ಸಾರಥ್ಯ ವಹಿಸಿದ್ದಾರೆ. ಅರಸೀಕೆರೆಯ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ನಗರಸಭೆ ಈಜುಕೊಳ ಉದ್ಘಾಟನೆ ಮತ್ತು 250 ಎಕರೆಯಲ್ಲಿ 250 ಕೋಟಿ ವೆಚ್ಚದ ಸೌರವಿದ್ಯುತ್ ಘಟಕ, ಫುಡ್ ಕೋರ್ಟ್​, 30 ಕೋಟಿ ವೆಚ್ಚದ ಹೈಟೆಕ್ ಬಸ್ ನಿಲ್ದಾಣದ ಶಂಕುಸ್ಥಾಪನೆಯನ್ನು, ಸಿಎಂ ನೆರವೇರಿಸಲಿದ್ದಾರೆ.

ಜೆಡಿಎಸ್ ತೊರೆದು ಕಾಂಗ್ರೆಸ್​ ಸೇರಿದ್ರು, ಅರಸೀಕೆರೆ ಕ್ಷೇತ್ರದಿಂದ 4ನೇ ಬಾರಿಗೆ ಶಿವಲಿಂಗೇಗೌಡ ಶಾಸಕರಾಗಿದ್ದಾರೆ. ಜಿಲ್ಲೆಯಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ಈ ಸಮಾವೇಶದ ಮೂಲಕ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಗೆಲುವಿಗೆ, ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿದ್ರೆ, 2028ರ ಚುನಾವಣೆಗೆ ಸಹಕಾರಿಯಾಗಲಿದೆ ಅನ್ನೋ ಲೆಕ್ಕಾಚಾರ ಹಾಕಿದ್ದಾರೆ. ಇದು ಬಿಜೆಪಿ-ಜೆಡಿಎಸ್​ ಗೆ ನುಂಗಲಾರದ ತುತ್ತಾಗಿದೆ.

ಅತೀ ಶೀಘ್ರದಲ್ಲೇ ಜಿಲ್ಲಾ ಕೇಂದ್ರದಲ್ಲೂ ಸಮಾವೇಶ ನಡೆಸಲು ರೂಪುರೇಷೆ ಸಿದ್ಧಪಡಿಸಲಾಗ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಅರಸೀಕೆರೆಯಲ್ಲಿ ಸಮಾವೇಶ ನಡೀತಿದೆ.

- Advertisement -

Latest Posts

Don't Miss