Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಲೈಂಗಿಕ ಪ್ರಕರಣದ ಆರೋಪಿಯಾಗಿ, ಕಿರುಕುಳ ನೀಡಿದ್ದರೆಂದು ಶಿಕ್ಷಕಿಯೊಬ್ಬರು ದೂರು ನೀಡಿದ್ದರು. ಈ ಬಗ್ಗೆ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕೆ ಗುರಪ್ಪರನ್ನ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಬಿ.ಗುರಪ್ಪ ವಿರುದ್ಧ ಪಕ್ಷದಿಂದ ಉಚ್ಛಾಟಿಸಲು ಆದೇಶಿಸಿದ್ದಾರೆ.
ಉದ್ಯಮಿಯಾಗಿರುವ ಗುರಪ್ಪ ಶಾಲೆಯೊಂದನ್ನು ನಡೆಸುತ್ತಿದ್ದು, ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ಈ ಬಗ್ಗೆ ಗುರಪ್ಪ ಶಿಕ್ಷಕಿಗೆ ಬೆದರಿಕೆ ಹಾಕಿದ್ದು, ಇದರ ಆಡಿಯೋವನ್ನು ಸಹ ಶಿಕ್ಷಕಿ, ಸಾಕ್ಷಿಯಾಗಿ ಪೊಲೀಸರಿಗೆ ನೀಡಿದ್ದಾರೆ.
ಅಲ್ಲದೇ, ಶಾಲೆಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಕಿರುಕುಳ ನೀಡಿ, ವೀಡಿಯೋ ಮಾಡಿ, ಆ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡುತ್ತೇವೆ ಎಂದು ಬೆದರಿಸುತ್ತಾರೆ ಎಂದು ಕೂಡ ಆರೋಪಿಸಲಾಗಿದೆ. ಈ ಬಗ್ಗೆ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.