Wednesday, May 29, 2024

Latest Posts

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

- Advertisement -

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ ವಿಫಲರಾಗುತ್ತಿದ್ದಾರೆ ಎಂದು ರಾಗಾ ವಿರುದ್ಧ ಹರಿಹಾಯ್ದರು.

ಸಚಿವ ಪ್ರಿಯಾಂಕ ಖರ್ಗೇ ಅವರು ನರೇಂದ್ರ ಮೋದಿ ಪ್ರಧಾನಿಮಂತ್ರಿಗಳಲ್ಲ, ಪ್ರಚಾರ ಮಂತ್ರಿ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಅವರು ಕೇವಲ ಪ್ರಚಾರದ ತೆವಲಿಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೇಯವರ ಅಧ್ಯಕ್ಷತೆಯ ಕಾಂಗ್ರೆಸ್ ಪಕ್ಷವು ಇದೀಗ ಯಾವ ಸ್ಥಿತಿಯಲ್ಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದರು.

ನಾನು ಸ್ಟಾರ್ ಪ್ರಚಾರಕ ನನ್ನನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್’ನಲ್ಲಿ ಮೊದಲಿಂದಲೂ ಎಲ್ಲವೂ ಸರಿಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಒಳಜಗಳವಿದೆ. ಹಾಗಾಗಿ ಇಂತಹ ಹೇಳಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಮೊದಲಿಂದಲೂ ಕೇಳಿಬರುತ್ತಿವೆ. ಇದಕ್ಕೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

ಏ. 15 ರಂದು ನಾಮಪತ್ರ ಸಲ್ಲಿಕೆ : ಏ.15 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ರಾಜ್ಯದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಅತಿದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಮೂರನೇ ಹಂತದ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್‌

ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

- Advertisement -

Latest Posts

Don't Miss