‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ, ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮುಳ್ಳಾಗಿ ಪರಿಣಮಿಸಿದೆ’

Political News: ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಆದರೆ ಅದರಿಂದ ಮಹಿಳೆಯರಿಗೇನೋ ಅನುಕೂಲವಾಗುತ್ತಿರಬಹುದು. ವಿದ್ಯಾರ್ಥಿಗಳಿಗೆ ಮಾತ್ರ, ತೊಂದರೆಯಾಗುತ್ತಿದೆ.

ಗ್ರಾಮೀಣ ಪ್ರದೇಶದ ಕೆಲ ಹೆಣ್ಣು ಮಕ್ಕಳು, ತಮಗೆ ಬಸ್ಸಿನಲ್ಲಿ ಸೀಟು ಸಿಗದೇ, ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಕಷ್ಟವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು, ಈ ವೀಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ವೀಡಿಯೋ ಬಗ್ಗೆ ಬರೆದಿರುವ ಅವರು, ಒಂದು ಕಡೆ ಬಿಜೆಪಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಗೆ ಒತ್ತು ನೀಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯಿಂದ, ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮುಳ್ಳಾಗಿ ಪರಿಣಮಿಸಿದೆ. ಅವರ ವಿದ್ಯಾಭ್ಯಾಸಕ್ಕೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಇಂಥ ಯೋಜನೆಗಳಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೇ, ತಮಗೆ ಬೇಕಾದ ಜಾಗಕ್ಕೆ ಸಮಯಕ್ಕೆ ಸರಿಯಾಗಿ ತಲುಪಲು, ಹಿರಿಯ ನಾಗರಿಕರಿಗೂ ಕೂಡ ಕಷ್ಟವಾಗುತ್ತಿದೆ. ಅವರು ಕೂಡ ಬಸ್ಸಿಗಾಗಿ ಪರದಾಡುತ್ತಿದ್ದಾರೆ. ಆರೋಗ್ಯದ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಗೆ ಹೋಗುವುದಕ್ಕೂ ಕಷ್ಟವಾಗುತ್ತಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಕರ್ನಾಟಕದಲ್ಲಿ ವಿಫಲವಾಗಿದೆ ಎಂದಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ..

‘ನನ್ನ ಸಲುವಾಗಿ ಏನನ್ನಾದರೂ ಕೇಳುವ ಬದಲು, ನಾನು ಸಾಯುವುದೇ ಮೇಲು’

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

About The Author