Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ. ಈ ಬಗ್ಗೆ ಎಎನ್ಐ ಜೊತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಂಟು ಜನ ಭಾಗಿಯಾಗಿದ್ದಾರೆ, ಅವರ ಹೆಸರನ್ನೂ ಹೇಳಿದ್ದೇನೆ. ಆದರೆ ಈವರೆಗೂ ಒಬ್ಬರನ್ನೂ ಬಂಧಿಸಿಲ್ಲ. ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದು, ಇವರ ಮೇಲೆ ವಿಶ್ವಾಸ ಕಳೆದುಕೊಂಡಿದ್ದೇನೆ. ಹೀಗಾಗಿ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ ತನಿಖೆಗೆ ನೀಡಿ ಎಂದು ಒತ್ತಾಯಿಸಿದರು.
ಸ್ಥಳೀಯ ಸರ್ಕಾರದಿಂದ ಸರಿಯಾಗಿ ತನಿಖೆಯಾಗದಿದ್ದರೇ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಾಗುತ್ತದೆ. ರಾಜ್ಯದ ಪೊಲೀಸರ ಮೇಲಿದ್ದ ಭರವಸೆ ಕಳೆದುಕೊಂಡಿದ್ದೇನೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಮಹಿಳೆ ಇದ್ದರೂ ಒಂದು ಹುಡುಗಿಯ ಕೊಲೆ ಆಗಿದೆ. ಮಹಿಳೆಯಾಗಿ ಒಂದು ಹುಡುಗಿಯ ಕೊಲೆ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಬರುತ್ತಾರೆ, ನಿಮ್ಮ ಜೊತೆ ಇದ್ದೇವೆ ಅಂತ ಹೇಳುತ್ತಾರೆ. ಕಳೆದ ನಾಲ್ಕು ದಿನಗಳಿಂದ ಈ ಎರಡು ಮಾತುಗಳನ್ನು ಬಿಟ್ಟು ಬೇರೆ ಏನು ಹೇಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರದ್ದೋ ಮಾತು ಕೇಳಿ, ಯಾರದ್ದೋ ಒತ್ತಡಕ್ಕೆ ಮಣಿದು ಪ್ರಕರಣದಿಂದ ಹಿಂದೆ ಸರೆಯುತ್ತಿದ್ದಾರೆ. ಅಲ್ಲದೆ ಗೃಹ ಮಂತ್ರಿ, ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಅಂತ ನನಗೆ ಮೂಲಗಳಿಂದ ಮಾಹಿತಿ ದೊರೆತಿದೆ. ಇಂತಹ ಅಧಿಕಾರಿಯನ್ನು ಯಾಕೆ ನೇಮಕ ಮಾಡಿದ್ದೀರಿ? ಇವರಿಂದ ಏನು ಉಪಯೋಗವಿದೆ? ನೇಹಾ ಅವರ ಮಗಳು ಇದ್ದ ಹಾಗೆ ಅಂತ ತಿಳಿದು ಯಾಕೆ ಆರೋಪಿಯನ್ನು ಎನ್ಕೌಂಟರ್ ಮಾಡಲಿಲ್ಲ? ಹೀಗಾಗಿ ಇವರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದೇನೆ ಎಂದರು.
ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..
ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ