Hubli News: ಹುಬ್ಬಳ್ಳಿ: ರಾಜ್ಯದ್ಯಂತ ವಕ್ಫ ಗೊಂದಲ ವಿಚಾರದಲ್ಲಿ ರಾಜ್ಯ ಸರ್ಕಾರದ ಮಿಸ್ ಮ್ಯಾನೇಜ್ಮೆಂಟ್ ಆಗಿದೆ ಸರ್ಕಾರದ ಅವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆಯಾಗಿದೆ. ವಕ್ಪ್ ಆಸ್ತಿ ಬಗ್ಗೆ ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೋರ್ಡ್ ಗೆ ಆಸ್ತಿ ನೀಡುವ ಮೂಲಕ ಅಲ್ಪಸಂಖ್ಯಾತರ ತುಷ್ಟಿಕರಣ ಹೀನ ಮಟ್ಟಕ್ಕಿಳಿದೆ. ಇದು ಅಲ್ಪ ಸಂಖ್ಯಾತರ ತುಷ್ಟಿಕರಣವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರತಿ ಬಾರಿ ತಪ್ಪು ಹೆಜ್ಜೆ ಇಡುತ್ತಿದೆ. ಈ ಕೂಡಲೇ ರೈತರಿಗೆ ನೀಡಿರುವ ನೋಟಿಸ್ ವಾಪಸು ಪಡೆಯಬೇಕು. ರೈತರ ಕ್ಷಮೆಯಾಚನೆ ಮಾಡಬೇಕು. ಇದು ರೈತರ ಜಮೀನು ಕಬಳಿಸುವ ತಂತ್ರವಾಗಿದೆ ಎಂದು ಆರೋಪಿಸಿದರು.
ಇದರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ನಮ್ಮ ಕಾಲದಲ್ಲಿ ಒಂದೋ ಎರಡು ಪ್ರಕರಣ ಆಗಿರಬಹುದು ಅದನ್ನು ಸ್ಥಳಿಯ ಅಧಿಕಾರಿಗಳನ್ನು ಕೇಳಬೇಕು. ರೈತರ ಹಿತಾಸಕ್ತಿ ಕಾಪಾಡಲು, ತುಷ್ಟಿಕರಣ ಖಂಡಿಸುವ ಕಾರ್ಯ ಬಿಜೆಪಿ ಮಾಡುತ್ತಿದೆ. ನಮ್ಮ ಶೋಧನ ಕಮೀಟಿ ವರದಿ ತಯಾರಿಸಲಿ ಎಂದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಸಾಬೀತು ಆಗಿದೆ. ಪ್ರಾಥಮಿಕವಾಗಿ ತಪ್ಪಾಗಿದೆ.
ಇಡಿ ಅವರಿಗೆ ಸಿದ್ದರಾಮಯ್ಯ ಕುಟುಂಬಸ್ಥರು ಮತ್ತು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ಸರ್ಕಾರದ ಮೇಲಿನ ಆಡಳಿತ ನಂಬಿಕೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸಿಎಂ ಯಾವಾಗ ಬೇಕಾದ್ರೂ ರಾಜಿನಾಮೆ ನೀಡಬಹುದು ಅಂತ ಅಧಿಕಾರಿಗಳು ಅಸಡೆ ಭಾವದಿಂದ ಕೆಲಸ ಮಾಡುತ್ತಿದ್ದಾರೆ. ಇಡಿ ಅವರು ಬಂದರೆ ಮಾಹಿತಿ ನೀಡದೆ ಓಡಿ ಹೋಗುತ್ತಿದ್ದಾರೆ ಎಂದರು.