Hubli News: ಹುಬ್ಬಳ್ಳಿ: ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
2004ರಿಂದ 2014ರವರೆಗಿನ ಕಾಂಗ್ರೆಸ್ ಸರ್ಕಾರವು ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಅನುದಾನ ನೀಡಿದ್ದರು. 2014ರಿಂದ ಈಗಿನ ಬಿಜೆಪಿ ಸರ್ಕಾರವು 2.36 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಿದೆ. ತೆರಿಗೆ ಪಾಲು ಹಂಚಿಕೆಯಲ್ಲಿ ಯುಪಿಎ ಸರ್ಕಾರ 81 ಸಾವಿರ ಕೋಟಿ ನೀಡಿದ್ದರೆ, ಈಗಿನ ಸರ್ಕಾರ 2.82 ಲಕ್ಷ ಕೋಟಿ ನೀಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅತಿ ಹೆಚ್ಚು ರಸ್ತೆ ನಿರ್ಮಾಣಕ್ಕಾಗಿ ಅನುದಾನ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ 2,814 ಕಿ.ಮೀ ರಸ್ತೆಗಳನ್ನು ನೀಡಿದ್ದರೆ, ಈಗಿನ ಬಿಜೆಪಿ ಸರ್ಕಾರವು 6,500 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ. ಇದರ ಜೊತೆಗೆ ಮಹಿಳೆಯರ ಅಭಿವೃದ್ಧಿಗಾಗಿ, ಆಯುಷ್ಮಾನ ಭಾರತ್, ಜಲ ಜೀವನ ಮಿಷನ್ ಸೇರಿದಂತೆ ಹಲವು ಯೋಜನೆಗಳಿಗೂ ಈಗಿನ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಈ ವಿಷಯವನ್ನು ಪಕ್ಷದ ಕಾರ್ಯಕರ್ತರು, ಮುಖಂಡರು ಮತದಾರರಿಗೆ ತಲುಪಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್