Friday, April 25, 2025

Latest Posts

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ ಎಂದರು.

ಹುಬ್ಬಳ್ಳಿಯ ವಿವಾದಿತ ಜಾಗ ಕಾಂಗ್ರೆಸ್ ನಿಂದ ಕಬ್ಜಾ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ಬಗ್ಗೆ ಮೂಲ ದಾಖಲೆಗಳನ್ನ ತೆಗೆಸುವ ಕುರಿತು ತಿಳಿಸಲಾಗಿದೆ. ಮುಂದೆ ಕಾದು ನೋಡೋಣ. ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ. ಸೂಕ್ತ ದಾಖಲಾತಿಗಳ ಮೂಲಕ ಸತ್ಯಾ ಸತ್ಯತೆ ಏನಿದೆ ಅನ್ನೋದನ್ನ‌ ನೋಡಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಲ್ಲಿ ದಿನೇ ದಿನೇ ಬಣ ರಾಜಕೀಯ ಹೆಚ್ಚಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಪಕ್ಷದ ಹಿರಿಯ ನಾಯಕರು ಈ‌ ಬಗ್ಗೆ ಗಮನ ಹರಿಸುತ್ತಾರೆ. ಇದರಿಂದಾಗಿ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ ಕುಂಭಮೇಳ ಪ್ರಯಾಣ ವಿಚಾರದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಅದು ಅವರವರ ಭಕ್ತಿ ಭಾವಕ್ಕೆ ಬಿಟ್ಟ ವಿಚಾರ. ಕುಂಭಮೇಳಕ್ಕೆ ಹೋಗುವ ವಿಚಾರಕ್ಕೆ ಯಾವುದೇ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

- Advertisement -

Latest Posts

Don't Miss