Political News: ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾಂಗ್ರೆಸ್‌ನ ದೊಡ್ಡ ಯಡವಟ್ಟನ್ನು ಬಿಜೆಪಿ ಬಯಲು ಮಾಡಿದೆ. ಬೆಳಗಾವಿಯಲ್ಲಿ ಹಾಕಿಸಿರುವ ಫ್ಲೆಕ್ಸ್‌ನಲ್ಲಿ ಭಾರತದ ನಕಾಶೆಯಿಂದ ಕಾಶ್ಮೀರವನ್ನೇ ಮಾಯ ಮಾಡಲಾಗಿದೆ. ಈ ಕಾರಣಕ್ಕೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದೆ.
ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ. ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ, ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹಾ ಹೀನ ಕೆಲಸಕ್ಕಾದರೂ “ಸಿದ್ದ” ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ. ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಈ ವಿವಾದಿತ ಬ್ಯಾನರ್ ಗಳನ್ನು ತೆರವುಗೊಳಿಸಿ, ಭಾರತದ ನಕಾಶೆಯನ್ನು ತಿರುಚಿದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಭಾರತದ ತಪ್ಪಾದ ನಕ್ಷೆಯ ಪ್ರಕಟಣೆಯು ಜಿಯೋಸ್ಪೇಷಿಯಲ್ ಮಾಹಿತಿ ಮಾನದಂಡಗಳ ಉಲ್ಲಂಘನೆಯನ್ನು ರೂಪಿಸುತ್ತದೆ ಮಾತ್ರವಲ್ಲದೆ ಕಾನೂನನ್ನು ಉಲ್ಲಂಘಿಸುತ್ತದೆ. IPC ಯ U/s 74, ಭಾರತದ ತಪ್ಪು ನಕ್ಷೆಯನ್ನು ಪ್ರದರ್ಶಿಸುವುದು ಸ್ಪಷ್ಟ ಅಪರಾಧವಾಗಿದೆ. ಇದು ರಾಷ್ಟ್ರೀಯ ಗೌರವ ಕಾಯಿದೆಯಡಿಯೂ ಉಲ್ಲಂಘನೆಯಾಗಿದೆ. ಭಾರತದ ಭೂಪಟವನ್ನು ಭಾರತೀಯ ಭೂಪ್ರದೇಶದ ಭಾಗವೆಂದು ತೋರಿಸದೆ ಭಾರತದ ನಕ್ಷೆಯನ್ನು ತಿರುಚಿದ ಮೂಲಕ ಕಾಂಗ್ರೆಸ್ ತನ್ನ ಐತಿಹಾಸಿಕ CWC ಅಧಿವೇಶನವನ್ನು ಆಚರಿಸುವ ವಿಧಾನ ಇದು. ಕಾಂಗ್ರೆಸ್ ಸರ್ಕಾರಕ್ಕೆ ಇಂಥ ಕೆಲಸ ಮಾಡಲು ನಾಚಿಕೆಯಾಗಬೇಕು. ಬೆಳಗಾವಿ ಎಸ್‌ಪಿಯವರಲ್ಲಿ ಮನವಿ ಮಾಡುವುದೇನೆಂದರೆ, ಭಾರತದ ನಕ್ಷೆಯನ್ನು ತಪ್ಪಾಗಿ ಚಿತ್ರಿಸಿದ ಸಂಘಟಕರ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಎಂದು ಯತ್ನಾಳ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.