Sunday, September 15, 2024

Latest Posts

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

- Advertisement -

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ ಮಾಡೋದಕ್ಕೆ ಒಲವು ತೋರಿದ್ದಾರೆ. ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ಸ್ಪಷ್ಟ ನಿಲುವು ತಾಳಬೇಕಿರೋ ಸೋನಿಯಾ ಈ ಕುರಿತು ಖರ್ಗೆಯವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಸೋನಿಯಾ ಗಾಂಧಿ ಖರ್ಗೆಯವರನ್ನು ಹಂಗಾಮಿ ಅಧ್ಯಕ್ಷರಾಗಿ ನೇಮಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿಗೆ ದೇವೇಗೌಡ್ರು ಕೊಟ್ಟರ ಕಡೆಯ ಎಚ್ಚರಿಕೆ!!? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=lE8E5jyVWHA
- Advertisement -

Latest Posts

Don't Miss