- Advertisement -
ಬೆಂಗಳೂರು: ರಾಜ್ಯದ 32 ನಿಗಮ ಮಂಡಳಿಗಳ ಸದಸ್ಯರ ನೇಮಕಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಪಕ್ಷಕ್ಕೆ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ನೀಡುವ ಕುರಿತು ತೀರ್ಮಾನಿಸಲಾಗಿದೆ.
ರಾಜ್ಯದ 32 ನಿಗಮ ಮಂಡಳಿಗಳ ಸುಮಾರು 600 ಸದಸ್ಯರನ್ನು ನೇಮಿಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ. 600 ಸ್ಥಾನಗಳಲ್ಲಿ 300 ಕಾಂಗ್ರೆಸ್ ಹಾಗೂ 300 ಜೆಡಿಎಸ್ ಸದಸ್ಯರನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಬಾರಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಅಂತ ತಿಳಿದುಬಂದಿದೆ. ಈಗಾಗಲೇ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದ್ದು ಶೀಘ್ರವೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯಲಿದೆ.
ಯಾದಗಿರಿಗೆ ಸಿಎಂ ಕೊಟ್ಟ ಆ ಬಂಪರ್ ಆಫರ್ ಏನು?? ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -