Thursday, April 17, 2025

Latest Posts

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

- Advertisement -

Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೊಬ್ಬ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೋವಾಗುವುದು ಸಹಜ, ಈಶ್ವರಪ್ಪ ಸೇರಿದಂತೆ ಕರಡಿ ಸಂಗಣ್ಣ, ಡಿ.ವಿ.ಸದಾನಂದಗೌಡ ಸೇರಿದಂತೆ ಮತ್ತಿತರೊಂದಿಗೆ ಪಕ್ಷದ ವರಿಷ್ಠರು ಮಾತುಕತೆ ಮಾಡಿ ಸಮಾಧಾನ ಪಡಿಸಲಿದ್ದಾರೆ ಎಂದರು.

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

- Advertisement -

Latest Posts

Don't Miss