Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯ ನಿಲುವು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲಾ ಕಡೆಯಲ್ಲಿಯೂ ಸೋಲುತ್ತಿದೆ. ಹೀಗಾಗಿ ಫೇಕ್ ವೋಟ್ ಇದೆ, ಇವಿಎಂ ಸರಿಯಿಲ್ಲ ಎಂದು ವಿನಾಕಾರಣ ಆರೋಪ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ಕುರಿತು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೂಕ್ತ ದಾಖಲೆಗಳು, ಅಂಕಿ ಸಂಖ್ಯೆಯಿದ್ದರೇ ಕೋರ್ಟ್ ಗೆ ಹೋಗಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನವಾದ ನ್ಯಾಯವಿದೆ. ಅದನ್ನು ಬಿಟ್ಟು ಗೆದ್ದಾಗ ಸುಮ್ಮನಿದ್ದು, ಸೋತಾಗ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗೆಲುವಿನ ಬಗ್ಗೆ ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾಗಿದೆ. ಬೇಕಾಬಿಟ್ಟಿಯಾಗಿ ಪಾರ್ಲಿಮೆಂಟ್ ಒಳಗೆ ಮಾತನಾಡಿ ಗೊಂದಲ ಸೃಷ್ಟಿಸುವ ಬದಲಿಗೆ ಕೋರ್ಟ್‌ನಲ್ಲಿ ಇತ್ಯರ್ಥ ಮಾಡಿ ಎಂದು ಸವಾಲು ಹಾಕಿದರು.

