ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ.
ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು 2 ಬಣವಾಗಿ ಪರಿಗಣಿಸಲು ನಿರ್ಧರಿಸಿರೋ ಕಾಂಗ್ರೆಸ್, ಬೆಂಗಳೂರು ಶಾಸಕರಾದ ರಾಮಲಿಂಗಾರೆಡ್ಡಿ, ಮುನಿರತ್ನ, ಗೋಪಾಲಯ್ಯ, ಭೈರತಿ ಬಸವರಾಜು, ಎಸ್.ಟಿ ಸೋಮಶೇಖರ್ ಹೊರತುಪಡಿಸಿ ಉಳಿದ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸ್ಪೀಕರ್ ಗೆ ದೂರು ಸಲ್ಲಿಸಲು ನಿರ್ಧರಿಸಿದೆ.
ಇನ್ನು ತಮ್ಮ ಸ್ವಗ್ರಾಮಕ್ಕೆ ತೆರಳಿರೋ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಇಂದು ಶಾಸಕರಿಂದ ಪಡೆಯಲಾಗಿರೋ ಸಾಮೂಹಿಕ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ಯಾರಾಗ್ತಾರೆ ಮುಂದಿನ ಸಿಎಂ..?ಮಿಸ್ ಮಾಡದೇ ಈ ವಿಡಿಯೋ ನೋಡಿ