Wednesday, September 17, 2025

Latest Posts

ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

- Advertisement -

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈ ಬಗ್ಗೆ ಯಾವ ಅನುಮಾನವಿಲ್ಲ ಎಂದು ಜೆಡಿಎಸ್, ಮತ್ತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದರು.

ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಈ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಶ್ರೀಮತಿ ಇಂದಿರಾ ಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ಶ್ರೀ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ಶ್ರೀ ವಿ.ವಿ.ಗಿರಿ ಅವರನ್ನು ಕಣಕ್ಕೆ ಇಳಿಸಿ ಆತ್ಮಸಾಕ್ಷಿ ಮತ ಹಾಕುವಂತೆ ಕರೆ ನೀಡಿದ್ದರು. ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಶ್ರೀ ನೀಲಂ ಸಂಜೀವರೆಡ್ಡಿ ಅವರು ಆತ್ಮಸಾಕ್ಷಿ ಮತ ಅಲಿಯಾಸ್ ಅಡ್ಡಮತದಿಂದ ಸೋತರು. ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್ ಎಂದು ಕಿಡಿಕಾರಿರುವ ಕುಮಾರಸ್ವಾಮಿ ಅಡ್ಡಕಸುಬಿ ಕಾಂಗ್ರೆಸ್ ಎಂದು ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

ದಾಖಲೆ ಬರೆದ ರಾಮಲಲ್ಲಾ: ಒಂದೇ ತಿಂಗಳಲ್ಲಿ 25 ಕೋಟಿ ಕಾಣಿಕೆ ಸಂಗ್ರಹ

- Advertisement -

Latest Posts

Don't Miss