- Advertisement -
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ.
ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಮತ್ತು ಮೌನ ಪ್ರತಿಭಟನೆ ಕೈಗೊಂಡಿದ್ದರು. ಅಶೀಶ್ ಮಿಶ್ರಾ ಕ್ರೈ ಬ್ರಾಂಚ್ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಲಖನೌನಲ್ಲಿ ಸಿಧು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ಬ್ಯೂರೋ ರಿಪೋರ್ಟ್, ಕರ್ನಾಟಕ ಟಿವಿ
- Advertisement -

