Political News: ಇಷ್ಟು ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುತ್ತಾರೆ ಅಂತಾ ಹೇಳಲಾಗುತ್ತಿತ್ತು. ಆದರೆ ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾರೊಂದಿಗೆ ತೆರಳಿ ರಾಹುಲ್, ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಉಪಸ್ಥಿತರಿದ್ದರು. ಈ ಮೂಲಕ ರಾಹುಲ್ ವಯನಾಡು ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್‌ನ್ನು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಕೂಡ ಸಾಧಿಸಿತ್ತು. ಇದೇ ಪ್ರಯೋಗವನ್ನು ಲೋಕಸಭೆ ಚುನಾವಣೆಯಲ್ಲಿ ಮಾಡಿದ್ದು, ಭಾರತ್ ನ್ಯಾಯ ಯಾತ್ರಾ ಮಾಡಿದ್ದಾರೆ. ದೇಶದ್ಲಲಿ ಇನ್ನೊಂದು ಚುನಾವಣೆ ಬಾಕಿ ಇದ್ದು, ಜೂನ್ 4ಕ್ಕೆ ಲೋಕಸಭೆ ಚುನಾವಣಾ ಫಲಿತಾಂಶ ಬರಲಿದೆ.