ಕಾಂಗ್ರೆಸ್ ನಾಯಕ ರಮಾನಾಥ್ ರೈ ಚಲಿಸುತ್ತಿದ್ದ ಕಾರು ಅಪಘಾತ: ಪಾರಣಾಪಾಯದಿಂದ ಪಾರು

Udupi: ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ್ ರೈ ಚಲಿಸುತ್ತಿದ್ದ ಕಾರು ಅಪಘಾತವಾಗಿ, ನಾಯಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಕಾರ್ಕಳದ ಸಾಣೂರಿನಲ್ಲಿ ಈ ಘಟನೆ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್ ರೈ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಚಾಲಕನಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಬಸ್‌ ಸ್ವಲ್ಪ ಜಖಂ ಆಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ, ಚಾಲಕನಿಗಾಗಲಿ ಯಾವುದೇ ಹಾನಿಯಾಗಲಿಲ್ಲ. ರಸ್ತೆ ಕಾಮಗಾರಿಯಾಗುತ್ತಿರುವ ಕಾರಣ, ಆ ರಸ್ತೆಯಲ್ಲಿ ಏಕಮುಖ ಸಂಚಾರವಿದೆ. ಹಾಗಾಗಿ ಮೂಡುಬಿದಿರೆಗೆ ತೆರಳುತ್ತಿದ್ದ ಬಸ್ ಮತ್ತು ಕಾರ್ಕಳಕ್ಕೆ ತೆರಳಿತ್ತಿದ್ದ ರೈ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅಪಘಾತವಾಗಿದೆ.

About The Author