ಮೈಸೂರಿನ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಅ. 16 ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬುನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೂನ್ಯವಾಗಿದ್ದರು.
ದೀಪಾವಳಿ ಹಬ್ಬದ ಹಿ
Obscene
ನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ 16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.
ಜಮೀನು ದಾರಿ ವಿಚಾರವಾಗಿ ನನಗೂ ಲೋಹಿತ್‌ಗೂ ನಡೆದ ಜಗಳಕ್ಕೆ ಈಗ ದ್ವೇಷದ ಕಾರಣಕ್ಕೆ ಮಗಳ ವಿಡಿಯೋ ವೈರಲ್ ಮಾಡಿ ಕೊಲೆ ಬೆದರಿಕೆ ಹಾಕುತ್ತಿರುವುದಾಗಿ ದೂರಿದ್ದಾರೆ. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

