Sunday, October 27, 2024

Latest Posts

Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ

- Advertisement -

ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು 15 ಕ್ಷೇತ್ರಗಳಲ್ಲಿ ಬಂಡಾಯದಿಂದ ಪಕ್ಷ ಸೋತಿದೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ, ಎಲ್ಲಾ ಕಡೆ ಗೆಲ್ಲುತ್ತೇವೆ ಎಂಬ ಆಲೋಚನೆ ನಿಮ್ಮ ತಲೆಯಿಂದ ತೆಗೆಯಬೇಕು. ಚುನಾವಣೆ ಮುನ್ನ ನಾವು ಹೇಗೆ ಬೂತ್ ಮಟ್ಟದಲ್ಲಿ ಬಿಜೆಪಿ ಹಾಗೂ ದಳವನ್ನು ಸೋಲಿಸಲು ಶ್ರಮಿಸಿದೆವೋ ಅದೇ ರೀತಿ ಸರ್ಕಾರದ ನೆರವು ಪಡೆದು ಪಕ್ಷ ಸಂಘಟನೆ ಮಾಡಬೇಕು. ಪ್ರತಿ ಬೂತ್ ನಲ್ಲಿ ಬೇರೆ ಪಕ್ಷದವರನ್ನು ಕಾಂಗ್ರೆಸ್ ನತ್ತ ಸೆಳೆದು ಮತಪ್ರಮಾಣವನ್ನು ಹೆಚ್ಚಳ ಮಾಡಿಕೊಳ್ಳಬೇಕು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಚುನಾವಣೆ ಕುರಿತು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ.

ಪ್ರತಿ ಪಂಚಾಯ್ತಿ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ಪಟ್ಟಿ ಮಾಡಿ ಎಲ್ಲಾ ವರ್ಗಕ್ಕೆ ಸಾಮಾಜಿಕವಾಗಿ ಪ್ರತಿ ಕ್ಷೇತ್ರದಲ್ಲಿ 50-100 ಸದಸ್ಯರ ನೇಮಕಾತಿ ಮಾಡಬೇಕು. ರಾಜ್ಯ ಮಟ್ಟದ ಪದಾಧಿಕಾರಿಗಳ ಹೆಸರು ಸೂಚಿಸುವಂತೆ ಕೇಳಿದ್ದೇವೆ. ಸಹಕಾರ ಸಚಿವಾಲಯದಲ್ಲಿ, ಇಂಧನ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಲು ಸಚಿವರ ಜತೆ ಸೂಚನೆ ನೀಡಿದ್ದೇವೆ. ನಿಮ್ಮೆಲ್ಲರಿಗೂ ಅಧಿಕಾರ ನೀಡಬೇಕು ಎಂಬುದು ನಮ್ಮ ಉದ್ದೇಶ.

ನಮ್ಮ ಬಳಿ ಸಾವಿರಾರು ನಾಯಕರು ಅನೇಕ ಹುದ್ದೆಗಳಿಗೆ ಅರ್ಜಿ ಹಾಕಿದ್ದಾರೆ. ಇದಕ್ಕಾಗಿ ಹೈಕಮಾಂಡ್ ನಾಯಕರು ನಮಗೆ ನಿರ್ದೇಶನ ನೀಡಿದ್ದು, ಈ ಅರ್ಜಿ ಹಾಕಿರುವವರು ತಮ್ಮ ಬೂತ್ ಮಟ್ಟದಲ್ಲಿ ಹೇಗೆ ಪಕ್ಷ ಸಂಘಟನೆ ಮಾಡಿದ್ದಾರೆ ಎಂಬ ಮಾಹಿತಿ ಕಲೆಹಾಕುವಂತೆ ತಿಳಿಸಿದ್ದಾರೆ.

DK Shivakumar: ಪಂಚಾಯ್ತಿ ಮತ್ತು ಪಾಲಿಕೆ ಚುನಾವಣೆಗೆ ತಯಾರಾಗಿ

Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss