Friday, October 18, 2024

Latest Posts

ಸರ್ಕಾರದ ವಿರುದ್ಧ ಅಸಮಾಧಾನ ರಾಜೀನಾಮೆ ಕೊಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ

- Advertisement -

Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು.

ಒಂದು ವರ್ಷವಾದರೂ ಖರೀದಿಸಿದ ರಾಗಿಗೆ ಸರ್ಕಾರ ಈವರೆಗೂ ಹಣ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಜಗಳೂರ ಪಟ್ಟಣದಲ್ಲಿರುವ ಆಹಾರ ಇಲಾಖೆಯ ಗೋದಾಮಿ ಮುತ್ತಿಗೆ ಹಾಕಿದ್ದಾರೆ. ಸುಮಾರು 5 ಕೋಟಿ ರೂ. ಬಾಕಿ ನೀಡಬೇಕಿದೆ. ಹಣ ಬಿಡುಗಡೆಗೆ ಒತ್ತಾಯಿಸಿ ರೈತರು ಹೋರಾಟ ಶುರು ಮಾಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಾಸಕ ಬಿ.ದೇವೇಂದ್ರಪ್ಪ, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಜಗಳೂರು ರಾಗಿ ಖರೀದಿ ‌ಕೇಂದ್ರದಲ್ಲಿ ಗೋಲ್ಮಾಲ್ ನಡೆದಿರುವ ಆರೋಪವೂ ಕೇಳಿಬಂದಿದೆ. ಅಸಲಿ ರೈತರ ಬದಲು ನಕಲಿ ರೈತರ ಹೆಸರಿನಲ್ಲಿ ರಾಗಿ ಖರೀದಿ ಹಣ ಪಾವತಿಯಾಗಿದೆ ಎಂಬ ಆರೋಪವಿದೆ. ರಾಗಿ ಮಾರಾಟ ಮಾಡಿದ ರೈತರಿಗೆ ಮಾತ್ರ ಆಹಾರ ಇಲಾಖೆ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ರೈತರು ದಿಕ್ಕು ತೋಚದಂತಾಗಿದ್ದಾರೆ.

ರೈತರ ಸಮಸ್ಯೆ ಆಲಿಸಿದ ಶಾಸಕ ದೇವೇಂದ್ರಪ್ಪ ಪ್ರತಿಭಟನಾ ಸ್ಥಳದಲ್ಲಿಯೇ ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಅಲ್ಲದೆ, ಒಂದು ವಾರದೊಳಗೆ ರೈತರಿಗೆ ಹಣ ನೀಡಿಲ್ಲವಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ದೇವೇಂದ್ರಪ್ಪ ರಾಜೀನಾಮೆ ಹೇಳಿಕೆ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

- Advertisement -

Latest Posts

Don't Miss