‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ, ಇಡಿ ಬಿಜೆಪಿಯ ಒಂದು ತಂತ್ರಗಾರಿಕೆಯ ಭಾಗವಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸಲು ಹೊರಟಿದೆ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಟೀಕಿಸಿದ್ದಾರೆ.  

ಉಪ ಚುನಾವಣೆ ಕುರಿತು ಮಾತನಾಡಿದ ಅವರು, ನಮ್ಮ ಅಭ್ಯರ್ಥಿಗಳು ಸಾಕಷ್ಟು ವಿದ್ಯಾವಂತರಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆದ್ದು ಜನರ ಸೇವೆಗೆ ಬರಲಿದ್ದಾರೆ‌ ಎಂದರು.

About The Author