Wednesday, November 29, 2023

Latest Posts

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

- Advertisement -

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ನಿನ್ನೆ ರಾತ್ರಿ ಶ್ರೀಮಂತ್ ಪಾಟೀಲರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕಾಂಗ್ರೆಸ್ ಶಾಸಕರೊಂದಿಗೆ ಪ್ರಕೃತಿ ರೆಸಾರ್ಟ್ ನಲ್ಲಿದ್ದ ಅವರು ದಿಢೀರನೆ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೆಂದು ದಾಖಲಾಗಿದ್ದಾರೆ.

ಇನ್ನು ಎದೆನೋವಿನಂತಹ ಗಂಭೀರ ಆರೋಗ್ಯ ಸಮಸ್ಯೆ ಎದುರಾದ ಕೂಡಲೇ ಬೆಂಗಳೂರಿನ ಹತ್ತಾರು ಸುಸಜ್ಜಿತ ಆಸ್ಪತ್ರೆಗಳನ್ನು ಬಿಟ್ಟು ಅವರು ಮುಂಬೈಗೇ ಯಾಕೆ ಚಿಕಿತ್ಸೆ ಪಡೆಯಲು ಹೋಗಿದ್ದಾರೆ ಅನ್ನೋ ಅನುಮಾನಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿ ಶಾಸಕ ಶ್ರೀಮಂತ್ ಪಾಟೀಲ್ ಒಂದು ವೇಳೆ ವಿಶ್ವಾಸಮತಕ್ಕೆ ಗೈರಾಗುವ ಉದ್ದೇಶದಿಂದ ಅತೃಪ್ತ ಶಾಸಕರ ಬಣ ಸೇರಿಬಿಟ್ಟರಾ ಅನ್ನೋ ಸಣ್ಣದೊಂದು ಅನುಮಾನಕ್ಕೂ ಕೂಡ ಎಡೆಮಾಡಿಕೊಟ್ಟಿದೆ.

ಭಿನ್ನಮತಕ್ಕೆ ಬ್ರೇಕ್ ಹಾಕಿದ್ರಾ ಭವಾನಿ ರೇವಣ್ಣ…? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=bNYqxGb1y9c
- Advertisement -

Latest Posts

Don't Miss