ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್ ಹೊಸೂರು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲೂ, ಆಸ್ತಿ ಘೋಷಣೆ ಮಾಡದ ಬಗ್ಗೆಯೂ ದೂರು ನೀಡಲಾಗಿತ್ತು.
ಬಳಿಕ, ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ, ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ, ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ಶುರು ಮಾಡಿದ್ರು. ಇದೀಗ ತನಿಖೆ ಚುರುಕುಗೊಳಿಸಿದ್ದು, ಶಾಸಕ ರಾಜೇಗೌಡ ಮನೆ ಮೇಲೆ ದಾಳಿ ನಡೆಸಿದೆ.

