www.karnatakatv.net : ದೆಹಲಿ: ಅಡುಗೆ ಅನಿಲ, ಪೆಟ್ರೋಲ್, ಮತ್ತು ಡಿಸೇಲ್ ಬೆಲೆ ಏರಿಕೆಯಾಗಿರುವದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಸೈಕಲ್ ಮೂಲಕ ಸಂಸತ್‌ಗೆ ತೆರಳಿ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಸುರೇಶ್ ಆರೋಪಿಸಿದರು. ತೈಲ ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸಿದ್ದರಿಂದ ಪೆಟ್ರೋಲ್ ಬೆಲೆ ಶತಕದ ಅಂಚನ್ನು ದಾಟಿದೆ. ಕೂಡಲೇ ಬೆಲೆ ಇಳಿಕೆ ಮಾಡಿ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದು ಡಿ. ಕೆ ಸುರೇಶ್ ಅವರು ಹೇಳಿದರು. ತೈಲ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ತಮ್ಮ ವಾಹನವನ್ನು ಮೂಲೆಯಲ್ಲಿ ಬಿಟ್ಟು ಸೈಕಲ್ ನತ್ತ ಮೂಖಮಾಡುತ್ತಿದ್ದಾರೆ. ಆದರಿಂದ ನಾವು ಸೈಕಲ್ ನಲ್ಲಿ ತೆರಳುವ ಮೂಲಕ ಈ ಪ್ರತಿಭಟನೆ ಹಮ್ಮಿಕೊಳ್ಳುತ್ತಿದ್ದೇವೆ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿದರು.