ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು.
ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಲಾಗುತ್ತಿದ್ದು, ಅವರಿಗೆ ಶುಭವಾಗಲೆಂದು ಹಾಸನ ನಗರದಲ್ಲಿರುವ ಶ್ರೀ ನೀರು ಬಾಗಿಲು ಆಂಜನೇಯ ದೇವಸ್ಥಾನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ವಿಜೃಂಭಣೆಯಿಂದ ಆಚರಿಸಿದರು. ಪಕ್ಷದ ಕಾರ್ಯಕರ್ತರಿಗೂ ಹಾಗೂ ಸಾರ್ವಜನಿಕರಿಗೂ ಸಿಹಿ ಹಂಚಿ ಪಟಾಕಿ ಸಿಡಿಸಿ ಜೊತೆಗೆ ೧೦೧ ಹಿಡಿಕಾಯಿ ಹೊಡೆದು ಪ್ರಾರ್ಥಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಯೂತ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಕಾಂಗ್ರೆಸ್ ಮುಖಂಡರಾದ ರಘು, ವಕೀಲರಾದ ಗಿರೀಶ್, ಪ್ರಕಾಶ್, ರಂಗೇಗೌಡ, ನಗರಸಭೆ ಮಾಜಿ ಸದಸ್ಯ ಅಬ್ದೂಲ್ ಕಹಿಂ, ಪ್ರಕಾಶ್ ಇತರರು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಎಂಬ ಹೆಸರಿನ ನಾನು..: ಎರಡನೇಯ ಬಾರಿ ಸಿಎಂ ಆಗಿ ಸಂಭ್ರಮಿಸಿದ ಸಿದ್ದು
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ
ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..