- Advertisement -
state news :
ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ. ಪಾಟೀಲ್ ಸೇರಿ ಹಲವು ನಾಯಕರ ಭಾಗಿಯಾಗಲಿದ್ದಾರೆ. ಇನ್ನೂ ಕಾರ್ಯಕ್ರಮ ಆರಂಭದ ಮೊದಲು ನಗರದ ಡೈರಿ ವೃತ್ತದಿಂದ ಪ್ರಜಾಧ್ವನಿ ವೇದಿಕೆಯವರೆಗೂ ರ್ಯಾಲಿ ನಡೆಯಲಿದೆ.ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ನಿಂದ ಭರ್ಜರಿ ತಯಾರಿ ನಡೆದಿದ್ದು, ಚುನಾವಣಾ ಹೊತ್ತಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸುತ್ತಿದೆ.
- Advertisement -