ರಾಜಕೀಯ:
ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಧರಣಿ ನಡೆಸಿದ ಬಿಜೆಪಿಗರು, ಕಾಂಗ್ರೆಸ್ ಗ್ಯಾರಂಟಿಗಳನ್ನು ಬೇಷರತ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಜೊತೆಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಗ್ಯಾರಂಟಿ ಜಾರಿಗೆ ಒತ್ತಾಯಿಸಿದರು. ಗ್ಯಾರಂಟಿ ಯೋಜನೆ ಪೂರ್ಣ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುಳ್ಳು ಸಹಿ ಹಾಕಿ ಮನೆ ಮನೆಗೆ ಗ್ಯಾರಂಟಿ ಹಂಚಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸರ್ಕಾರ ಜಾರಿಗೆ ಬಂದ 24 ಗಂಟೆಯಲ್ಲಿ ಭಾಗ್ಯಗಳ ಜಾರಿ ಎಂದು ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭರವಸೆ ನೀಡಿದ್ದರು. ಆದರೆ ಎರಡು ತಿಂಗಳೂ ತಿಂಗಳು ಕಳೆಯುತ್ತ ಬಂದರೂ ಇನ್ನೂ ಯೋಜನೆಗಳು ಜಾರಿಯಾಗಿಲ್ಲ. ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಯೋಜನೆ ಕೊಡಿ ಎಂದು ನಾವು ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ