ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ತಗೆದುಕೊಳ್ಳಲಾಯಿತು. ಹುಬ್ಬಳ್ಳಿಯ ಗ್ಲಾಸ್ ಹೌಸ್ ಎದುರಿಗೆ ಇರುವ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಇನ್ನೂ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಂಸದ ಐ.ಜಿ.ಸನದಿ, ಎ.ಎಂ.ಹಿಂಡಸಗೇರಿ ಸೇರಿದಂತೆ ಬಹುತೇಕ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್; ಭಾರಿ ವಿವಾದ