ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ.
ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು ಹಾಗೂ ಸಿದ್ದರಾಮಯ್ಯನವರು ನಮ್ಮ ಹೈಕಮಾಂಡ್ ನಾಯಕರ ಮಾರ್ಗದರ್ಶನದ ಮೇರೆಗೆ ನಮ್ಮ ಕೆಲಸ ಮುಂದುವರಿಸಿದ್ದೇವೆ.
ಸಂಘಟಿತ ಪ್ರದರ್ಶನದಿಂದ ಕಾಂಗ್ರೆಸ್ ಈ ಯಶಸ್ಸು ಸಾಧಿಸಿದೆ. 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದೇವೆ. ಎಲ್ಲಾ ರಾಜ್ಯ ನಾಯಕರನ್ನು ಕರೆಸಿ ಸಭೆ ಮಾಡವಾಗ ಕರ್ನಾಟಕ ಮಾದರಿ ಅನುಸರಿಸುವಂತೆ ಸೂಚಿಸಿದ್ದಾರೆ.
ವೈಯಕ್ತಿಕ ವಿಚಾರ ಬದಿಗೊತ್ತಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನಮ್ಮ ಗುರಿ. ದೇಶದ ಎಲ್ಲಾ ವಿರೋಧ ಪಕ್ಷಗಳು ಇಂದು ಕಾಂಗ್ರೆಸ್ ಜೊತೆ ಕ ಜೋಡಿಸಲು ತೀರ್ಮಾನಿಸಿ ಕರ್ನಾಟಕದಲ್ಲೇ ಇಂಡಿಯಾ ಮೈತ್ರಿ ಕೂಟ ರಚನೆ ಮಾಡಿದ್ದಾರೆ. ನಮಗೆ ಸಿಕ್ಕಿರುವ ಶಕ್ತಿಯನ್ನು ನಾವು ಉಳಿಸಿಕೊಂಡು ಹೋಗಬೇಕಿದೆ.
ನಾವು ಮೇಕೆದಾಟು, ಪ್ರಜಾಧ್ವನಿ, ಜನಧ್ವನಿ, ಭಾರತ ಜೋಡೋ, ಸ್ವಾತಂತ್ರ್ಯ ನಡಿಗೆ ಮಾಡಿದೆವು. ಭಾರತ ಜೋಡೋ ಯಾತ್ರೆ ನಂತರ ರಾಹುಲ್ ಗಾಂಧಿ ಅವರ ಖ್ಯಾತಿ ಹೆಚ್ಚಾಗಿದ್ದು, ಇದನ್ನು ಸಹಿಸಲಾಗದೇ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ಭಾಷಣ ವಿಚಾರವಾಗಿ ಬಿಜೆಪಿಯವರು ಸೂರತ್ ನಲ್ಲಿ ಪ್ರಕರಣ ದಾಖಲಿಸಿದರು. 7 ಲಕ್ಷ ಮಂತಗಳ ಅಂತರದಲ್ಲಿ ಗೆದ್ದ ಸಂಸದನನ್ನು ಷಡ್ಯಂತ್ರದ ಮೂಲಕ ಸಂಸತ್ತಿನಿಂದ ಅನರ್ಹ ಮಾಡಿದ್ದರು. ಈಗ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕೊಟ್ಟ ಪರಿಣಾಮ ಅವರು ಸಂಸತ್ ಸದಸ್ಯರಾಗಿ ಮುಂದುವರಿಯುತ್ತಿದ್ದಾರೆ.
ಈ ಮಧ್ಯೆ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದಿರಿ. ಇದಕ್ಕಾಗಿ ನಿಮ್ಮ ಶ್ರಮ ನಮಗೆ ನಿಮಗೆ ಗೊತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದೀರಿ. ಬಿಜೆಪಿ ನಾಯಕರು ರಾಹುಲ್ ಗಾಂಧಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದರು. ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ತುರುವೇಕೆರೆ ಕ್ಷೇತ್ರ ಬಿಟ್ಟು ಎಲ್ಲಾ ಕಡೆಗಳಲ್ಲಿ ಪಕ್ಷ ಗೆದ್ದಿದ್ದೇವೆ. ಇದಕ್ಕೆ ನಿಮ್ಮ ಶ್ರಮ ಕಾರಣ. ನೀವು ಎಷ್ಟು ಹಣ ಖರ್ಚು ಮಾಡಿದ್ದೀರಿ ಎಂಬುದು ಗೊತ್ತಿದೆ.
DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್
d