Tuesday, April 22, 2025

Latest Posts

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

- Advertisement -

Political news:

ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ.

ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್ ನೀಡಿದರೆ ಅವರ ಪುತ್ರಿ ಸೌಮ್ಯರೆಡ್ಡಿ ಯವರಿಗೆ ಜಯನಗರ ಕ್ಷೆತ್ರದಿಂದ ಸ್ಪರ್ಧೆ ಮಾಡುತಿದ್ದಾರೆ.

ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಧ್ರುವನಾರಾಯಣ ಇತ್ತೀಚೆಗೆ ನಿಧನರಾಗಿದ್ದಾರೆ. ಅವರ ಪುತ್ರ ದರ್ಶನ್‌ ಧ್ರುವನಾರಾಯಣ ಅವರಿಗೆ ನಂಜನಗೂಡಿನಲ್ಲಿ ಟಿಕೆಟ್‌ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು. ದರ್ಶನ್ ಅವರನ್ನು ನಂಜನಗೂಡಿಯಲ್ಲಿ ಕಣಕ್ಕೆ ಇಳಿಸಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ತಂದೆ- ಮಕ್ಕಳು ತಮ್ಮ ಅದೃಷ್ಟ ಪರೀಕ್ಷಿಸಿಲಿದ್ದಾರೆ. ಬೆಂಗಳೂರಿನ ವಿಜಯನಗರದಿಂದ ಎಂ.ಕೃಷ್ಣಪ್ಪ , ಅವರ ಪುತ್ರ ಪ್ರಿಯಾ ಕೃಷ್ಣಗೆ ಗೋವಿಂದರಾಜನಗರ ಟಿಕೆಟ್ ಘೋಷಿಸಲಾಗಿದೆ.

ದಾವಣಗೆರೆ ದಕ್ಷಿಣದಿಂದ ಶಾಮನೂರ ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಿಂದ ಹಾಗೂ ಅವರ ಪುತ್ರಿ ರೂಪಾ ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಅದೃಷ್ಯ ಪರೀಕ್ಷೆಗಿಳಿಯಲಿದ್ದಾರೆ.

ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ನೀಡಲಾಗಿದೆ. ಪುತ್ರನಿಗೆ ಟಿಕೆಟ್‌ ನೀಡಬೇಕು ಎಂದು ಪಾವಗಡದ ಹಾಲಿ ಶಾಸಕ ವೆಂಕಟರಮಣಪ್ಪ ಮನವಿ ಮಾಡಿದ್ದರು. ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಹಾಲಿ ಶಾಸಕರು ಇರುವ ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ), ಹರಿಹರ (ಎಂ. ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ), ಲಿಂಗಸುಗೂರು (ಡಿ.ಎಸ್‌.ಹೂಲಗೇರಿ), ಅಫಜಲಪುರ (ಎಂ.ವೈ.ಪಾಟೀಲ), ಶಿಡ್ಲಘಟ್ಟ (ವಿ.ಮುನಿಯಪ್ಪ) ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

‘ಶಕ್ತಿವಂತ ಯುವಕರ ಯವತಿಯರನ್ನ ಸೋಂಬೇರಿಗಳನ್ನಾಗಿಸುವುದು ಬೇಡ..’

ಮಂಡ್ಯದತ್ತ ಮೋದಿ

- Advertisement -

Latest Posts

Don't Miss