Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ ಸರಮಾಲೆಯನ್ನೇ ಮಾಡಿದೆ. ಟ್ವೀಟ್ ಮಾಡಿ ಪ್ರತಿಪಕ್ಷಗಳ ಕಾಲೆಳೆದಿದೆ.ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ ಇಲ್ಲದ ಪಕ್ಷ ಎಂದು ಸಾಬೀತು ಮಾಡಿದ್ದರು, ಬೊಮ್ಮಾಯಿಯವರು ಜೆಡಿಎಸ್ ಕಚೇರಿಗೆ ತೆರಳಿ, ಪತ್ರಿಕಾಗೋಷ್ಠಿಗೆ ಜೆಡಿಎಸ್ ನೆರವು ಪಡೆದು ತಮಗೆ ದಮ್ಮು ತಾಕತ್ತು ಇಲ್ಲ ಎಂದು ಸಾಬೀತು ಮಾಡಿದ್ದರು.

ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ! ಎಂಬುವುದಾಗಿ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷಗಳಿಗೆ  ಪ್ರತಿ ಉತ್ತರ ನೀಡಿದೆ.

DK Shivakumar : ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸಲಾಗುತ್ತಿದೆ: ಡಿಕೆಶಿ

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

About The Author