Friday, November 22, 2024

Latest Posts

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

- Advertisement -

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.

ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿತ್ತು. ಆದರೆ ಈ ಮೂವರು ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನು ಕಾಂಗ್ರೆಸ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್, ಕಾರ್ಯಕ್ರಮಕ್ಕೆ ಬರುವುದು, ಬಿಡುವುದು ಅವರ ಇಷ್ಟ. ನಾವು ಅವರಿಗೆ ರಾಮಮಂದಿರ ಉದ್ಘಾಟನಾ ಆಹ್ವಾನ ಪತ್ರಿಕೆಯನ್ನು ನೀಡಿ, ನಮ್ಮ ಕರ್ತವ್ಯ ಮಾಡಿದ್ದೇವೆ. ಅವರು ಬರಲು ಬಯಸದಿದ್ದರೆ ಪರವಾಗಿಲ್ಲ ಎಂದಿದ್ದಾರೆ.

‘ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ. ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ’

‘ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ’

‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’

- Advertisement -

Latest Posts

Don't Miss