ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತೇವೆ. ನಮ್ಮ ಸ್ವಂತ ಬಲದಿಂದಲೇ 140 ರಿಂದ 150 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂಬುದಾಗಿ ಹೇಳಿದರು.
ಜೆಡಿಎಸ್ ಜಾತ್ಯಾತೀತ ಪಕ್ಷವೆಂದು ಹೇಳುತ್ತಲೇ ಬಸವಕಲ್ಯಾಣ, ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರು. ಸೋಲುತ್ತದೆ ಅಂತ ಗೊತ್ತಿದ್ದು ಹೀಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಬಿಜೆಪಿ ಗೆಲ್ಲಿಸೋದಕ್ಕೋ, ಮುಸ್ಲೀಂ ಅಭ್ಯರ್ಥಿಗಳನ್ನು ಗೆಲ್ಲಿಸೋದಕ್ಕೋ ಎಂಬುದಾಗಿ ವಾಗ್ದಾಳಿ ನಡೆಸಿದರು.