State News : ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ನೀಡುವ ವಿಚಾರವಾಗಿ ಕೇಂದ್ರ ಮಸೂದೆ ಮಂಡಿಸಿದೆ. ಈ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲವನ್ನು ಘೋಷಿಸಿದರು.
ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ಒಮ್ಮತದ ನಿರ್ಧಾರವಾಗಿದೆ ಎಂದು ತಿಳಿಸಿದರು. ಮಹಿಳಾ ಮೀಸಲಾತಿಯು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕನಸಾಗಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡಲು ರಾಜೀವ್ ಗಾಂಧಿ ಸಾಂವಿಧಾನಿಕ ತಿದ್ದುಪಡಿಯನ್ನು ತಂದರು. ಇದರ ಶ್ರೇಯಸ್ಸು ಅವರಿಗೂ ಸಲ್ಲಬೇಕು ಎಂದು ಸೋನಿಯಾ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆಗೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಸೂದೆಯಲ್ಲಿ ಮುಸ್ಲಿಮರು ಮತ್ತು ಒಬಿಸಿ ಸಮುದಾಯಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ. ಆದ್ದರಿಂದ ಮಸೂದೆಯನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ನೀವು ಕಾನೂನನ್ನು ಮಾಡುತ್ತೀರಿ. ದೇಶದಲ್ಲಿ ಇಲ್ಲಿಯವರೆಗೆ 17 ಲೋಕಸಭಾ ಚುನಾವಣೆಗಳು ನಡೆದಿವೆ. 8,990 ಸಂಸದರು ಆಯ್ಕೆಯಾಗಿದ್ದಾರೆ. ಅದರಲ್ಲಿ ಕೇವಲ 520 ಸಂಸದರು ಮುಸ್ಲಿಮರು. 520 ಮುಸಲ್ಮಾನರಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮಹಿಳೆಯರೂ ಕಾಣಿಸುವುದಿಲ್ಲ ಎಂದು ಒವೈಸಿ ಹೇಳಿದ್ರು.
‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’
Cogress: ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಸಂಸದೆ ಸುಮಲತಾ..