- Advertisement -
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು ರಸ್ತೆಯಲ್ಲೇ ಒಲೆ ಹಚ್ಚಿ, ಚಪಾತಿ ಲಟ್ಟಿಸಿ, ಅಡುಗೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಮಹಿಳಾ ವಿರೋಧಿ ಬಿಜೆಪಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು, ಈ ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತೆಯರು ಭಾಗಿಯಾಗಿದ್ದರು. ಕೆಲ ಕಾಲ ರಸ್ತೆ ಬಂದ್ ಮಾಡಿ, ರಸ್ತೆಯಲ್ಲೇ ಅಡುಗೆ ಮಾಡಿ, ಪ್ರತಿಭಟಸಿದರು.
- Advertisement -