ಸಖರಾಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ

2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ, ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ.

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ​ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದ್ದು, ಐವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

About The Author