ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಚೇರ್ ಮೇಲಕ್ಕೆತ್ತಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳಲು ಮುಂದಾಗಿದ್ದಾರೆ.
ಪ್ರಸಾದ್ ಅಥವಾ ಮುನಿಶಾಮಣ್ಣಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಶಾಸಕ ಶರತ್ ಬಚ್ಚೇಗೌಡ, ಮೂಲ ಕಾಂಗ್ರೆಸ್ ನಾಯಕರನ್ನು ಬಿಟ್ಟು ಕಚೇರಿ ಉದ್ಘಾಟನೆ ಮಾಡಿದ್ದರು. ಹಾಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದವರನ್ನು ಗುರುತಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..