Friday, April 18, 2025

Latest Posts

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

- Advertisement -

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.

ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ ಇದೆ. ನಿತ್ಯ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಬೆಲೆ ಏರಿಕೆ ತಗ್ಗಿಸಬೇಕು, ಕೃಷಿ ಕಾಯ್ದೆ ಹಿಂಪಡೆಯಬೇಕು ಹಾಗೂ ನಿರುದ್ಯೋಗ ಸಮಸ್ಯೆ ನೀಗಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ  ಮಾಡಿ ಬಳಿಕ  ಮಾತನಾಡಿದ  ಶಾಸಕ ಪ್ರಸಾದ ಅಬ್ಬಯ್ಯ, ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು‌. ಗಾಂಧಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿತ್ತು. ಆದ್ರೆ ಪ್ರತಿಭಟನೆ ಮೂಲಕ ಆಚರಣೆ ಮಾಡುತ್ತಿರುವದು ಖೇದಕರ ಎಂದರು.

ಕರ್ನಾಟಕ ಟಿವಿ- ಹುಬ್ಬಳ್ಳಿ

- Advertisement -

Latest Posts

Don't Miss