Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ ಕಾಲದಿಂದಲೂ ನಮ್ಮ ದೇಶವಿದೆ. ಮೊದಲಿನಿಂದಲೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಇದೆ ಎಂದು ಬೆಲ್ಲದ್ ಹೇಳಿದ್ದಾರೆ.
ನಮ್ಮ ದೇಶದಲ್ಲಿ ಹೆಚ್ಚು ಬೆಳವಣಿಗೆ ಆಗಿದ್ದು ದಕ್ಷಿಣದ ರಾಜ್ಯಗಳು. ಕರ್ನಾಟಕ ಮತ್ತು ತಮಿಳನಾಡು ದೊಡ್ಡ ಜಿಎಸ್‌ಟಿ ರಾಜ್ಯಗಳು. ದೊಡ್ಡ ಸುಶಿಕ್ಷಿತರ ರಾಜ್ಯ ಕೇರಳ. ವೇಗವಾಗಿ ಅಭಿವೃದ್ಧಿಯಾದ ರಾಜ್ಯಗಳಲ್ಲಿ ತೆಲಂಗಾಣ ಇರುತ್ತದೆ ಎಂದು ಬೆಲ್ಲದ್ ಹೇಳಿದ್ದಾರೆ.
ದಕ್ಷಿಣ ರಾಜ್ಯಗಳು ಅಭಿವೃದ್ಧಿ ಬಹಳ ಆಗಿದೆ. ಜನರನ್ನು ದಾರಿ ತಪ್ಪಿಸುವ ಹೇಳಿಕೆ ಡಿಕೆ ಸುರೇಶರಿಂದ ಅಪೇಕ್ಷಿಸಿರಲಿಲ್ಲ. ಸಿದ್ದರಾಮಯ್ಯ ಸಹ ಇಂತಹ ಕೆಲಸ ಮಾಡಿದ್ದರು. ಮೆಟ್ರೋದಲ್ಲಿ ಇಂಗ್ಲಿಷ್ ನಡೆಯುತ್ತದೆ. ಆದರೆ ಹಿಂದಿ ಬೋರ್ಡ್ ವಿರೋಧಿಸಿದ್ದರು. ಹಿಂದಿ ಹೇರಿಕೆ ಅಂತಾ ಗದ್ದಲ ಎಬ್ಬಿಸಿದರು. ನಂದಿನಿ, ಅಮೂಲ್ ವಿಷಯ ಎತ್ತಿದ್ದರು. ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್‌ಗರು ಎಂದು ಬೆಲ್ಲದ್ ವಾಗ್ದಾಳಿ ನಡೆಸಿದ್ದಾರೆ.
ಡಿಕೆಸು ತಮ್ಮ ತಪ್ಪು ಒಪ್ಪಿ, ಹೇಳಿಕೆ ವಾಪಸ್ ಪಡೆಯಬೇಕು. ದೇಶದ ದೃಷ್ಟಿಯಿಂದ ಇಂತಹ ಹೇಳಿಕೆಗಳು ಸರಿಯಲ್ಲ. ಜವಾಬ್ದಾರಿ ಸ್ಥಾನದಲ್ಲಿದ್ದವರು ಇಂತಹ ಹೇಳಿಕೆ ನೀಡಬಾರದು. ಖರ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಡಿ.ಕೆ.ಸು ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲವೇ ಖರ್ಗೆಯವರೇ ಡಿಕೆಸು ಹೇಳಿಕೆ ತಪ್ಪು ಅಂತಾ ಹೇಳಲಿ ಎಂದು ಬೆಲ್ಲದ್ ಆಗ್ರಹಿಸಿದ್ದಾರೆ.
ಇನ್ನು ಕೆಲವರು ಡಿ.ಕೆ.ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೆಲ್ಲದ್, ಹಿರಿಯಕ್ಕನ ಛಾಳಿ ಮನೆ ಮಂದಿಗೆಲ್ಲ ಎನ್ನುವಂತಾಗಿದೆ. ಒಬ್ಬರು ಮಾಡಿದ್ದು, ಇನ್ನೊಬ್ಬರು ಮಾಡುತ್ತ ಹೊರಟಿದ್ದಾರೆ ಎಂದು ಬೆಲ್ಲದ್ ಹೇಳಿದ್ದಾರೆ.
11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ
ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ